ಉಡುಪಿ ಪ್ರತಿನಿಧಿ
ಉಡುಪಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಉಡುಪಿಯ ನ್ಯಾಯಾಲಯದ ಆವರಣದಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ , ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ನ್ಯಾಯಾಧೀಶರು ,ವಕೀಲರ ಸಂಘದ ಅಧ್ಯಕ್ಷ ,ಹಿರಿ ಕಿರಿಯ ವಕೀಲರು ಮತ್ತು ಸಿಬ್ಬಂದಿ ಯೋಗ ಗುರುಗಳ ಮಾರ್ಗದರ್ಶನದಲ್ಲಿ ಒಂದು ಗಂಟೆಗಳ ಕಾಲ ಯೋಗ ಮಾಡಿದರು.