ಉಡುಪಿ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿ ಮಾಹಿತಿ

ಲೋಕಸಭಾ ಚುನಾವಣೆ ಹಿನ್ನೆಲೆ, ಮದ್ಯ ಮಾರಾಟ ನಿಷೇಧ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಏಪ್ರಿಲ್ 24 ರ ಸಂಜೆ 5 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ. 4 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಉಡುಪಿ: 51 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪೂರ್ವಾ ಸಿದ್ಧತೆ

ಉಡುಪಿ: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಎಲ್ಲಾ. ಪೂರ್ವ ಸಿದ್ಧತೆಗಳನ್ನು ಮಾಡಲಾಗಿದ್ದು, ಜಿಲ್ಲೆಯ 272 ಶಾಲೆಗಳಿಂದ 14,331 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು. ಪರೀಕ್ಷೆಯನ್ನು ನಡೆಸಲು ಒಟ್ಟು 806 ಮಂದಿಯನ್ನು ನೇಮಿಸಲಾಗಿದ್ದು ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಪ್ರಶ್ನೆಪತ್ರಿಕೆ ಪಾಲಕರು ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಪಡೆಯಲು ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ.

ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯಲು ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಸಂಚಾರಿ ವಿಚಕ್ಷಣಾ ದಳವನ್ನು ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸ್ಥಾನಿಕ ಜಾಗೃತ ದಳವನ್ನು ಪೊಲೀಸ್ ಪಹರೆಯನ್ನು ತುರ್ತು ಚಿಕಿತ್ಸಾ ಘಟಕವನ್ನೂ ಸ್ಥಾಪಿಸಲಾಗಿದೆ. ಪ್ರತಿಯೊಂದು ರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ತನಕ ಸಿ.ಆರ್.ಪಿ.ಸಿ ಸೆಕ್ಷನ್ 144 ರಂತೆ ಪ್ರತಿಬಂಕಾಜ್ಞೆಯನ್ನು ವಿಧಿಸಲಾಗಿದೆ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆಯದಂತೆ ಪಾರದರ್ಶಕತೆಯಿಂದ ನಡೆಸಲು ಪರೀಕ್ಷೆ ನಡೆಯುವ ಕೇಂದ್ರಗಳ ಕೊಠಡಿಗಳಲ್ಲಿ ಸಿ.ಸಿ.ಟಿ.ವಿಯನ್ನು ಅಳವಡಿಸಿದ್ದು ಜಿಲ್ಲಾ ಪಂಚಾಯತ್ ಸಂಕೀರ್ಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಛೇರಿಯಲಿ ಸಿ

.ಸಿ.ಟಿ.ವಿಯನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಶೇಖರಣಾ ಸ್ಥಳದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ನೇರವಾಗಿ ಸಂಬಂಧಪಟ್ಟ ಅಧಿಕಾರಿಗ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದು ಸರಕಾರದ ಸುತ್ತೋಲೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಮುಖ್ಯ ರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಮತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ
ಉಡುಪಿ: 2024ನೇ ಸಾ ಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ನಡೆಯಲಿದ್ದು, ಸದ್ರಿ ಪರೀಕ್ಷೆಯ ಬೈಂದೂರು ವಲಯದ ಪರೀಕ್ಷಾ ಕೇಂದ್ರವಾದ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು ವಲಯ (ಜಿ.ಎ.049) ಈ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಬೋಳಂಬಳ್ಳಿ, ಕಾಲೋಡು ಕಡೆಯಿಂದ ಬರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷಾ ಕೇಂದ್ರನ್ನು ತಲುಪಲು ಬಸ್ನ ಅವಶ್ಯಕತೆ ಇರವುದರಿಂದ ಸದ್ರಿ ಮಾರ್ಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿರುತ್ತಾರೆ

ನೀತಿ ಸಂಹಿತೆಗೆ ಸಂಬಂಧಿಸಿದ ದೂರು ಸಲ್ಲಿಕೆಗೆ ಸಹಾಯವಾಣಿ ಸ್ಥಾಪನೆ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಛೇರಿಯಲ್ಲಿ ಕಂಟ್ರೋಲ್ ರೂಮ್ ಸಂ.0820-2530100 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ : ರಜಾ ದಿನಗಳಲ್ಲಿ ನಗದು ಕೌಂಟರ್ ಓಪನ್
ಉಡುಪಿ: ಗ್ರಾಹಕರು ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ 23, 24, 29 ಹಾಗೂ 31 ರಂದು ಜಿಲ್ಲಾ ವ್ಯಾಪ್ತಿಂು ಮೆಸ್ಕಾಂನ ಎಲ್ಲಾ ನಗದು ಕೌಂಟರ್‌ಗಳು ತೆರೆಯಲಾಗುತ್ತಿದ್ದು, ಗ್ರಾಹಕರು ಸೌಲಭ್ಯದ ಸದುಪಯೋಗಪಡಿಸಿಕೊಂಡು ವಿದ್ಯುತ್ ಬಿಲ್ಗಳನ್ನು ಪಾವತಿಸಿ ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಕುಡಿಯುವ ನೀರಿನ ಸಮಸ್ಯೆ : ಸಹಾಯವಾಣಿ ಸ್ಥಾಪನೆ
ಉಡುಪಿ: ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ಅನ್ನು ಪ್ರಾರಂಭಿಸಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 18004257049 ಗೆ ಕರೆಮಾಡಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು & ನ್ಯೆರ್ಮಲ್ಯ ವಿಭಾಗದ ಕಛೇರಿ ಪ್ರಕಟಣೆ ತಿಳಿಸಿದೆ

Latest Indian news

Popular Stories