ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಮಾಸ್ಟರ್ ಪ್ಲಾನ್ ಅನುಮೋದನೆ: ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಸಭೆ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಮಾಸ್ಟರ್ ಪ್ಲಾನ್ ಅನುಮೋದನೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಝಡ್.ಆರ್.ಆರ್. ನಲ್ಲಿ ಕೆಲವು ತಿದ್ದುಪಡಿ ಮಾಡುವ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾದ ಶಶಿಕುಮಾರ್ ಹಾಗೂ ಬಿಲ್ಡರ್ ಅಸೋಸಿಯೇಷನ್ ಮತ್ತು ಇಂಜಿನಿಯರಿಂಗ್ ಅಸೋಸಿಯೇಷನ್ ರೊಂದಿಗೆ ಇಂದು ಶಾಸಕ ಕೆ. ರಘುಪತಿ ಭಟ್ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಫೆಬ್ರವರಿ ತಿಂಗಳ ಒಳಗಾಗಿ ಮಾಸ್ಟರ್ ಪ್ಲಾನ್ ಡ್ರಾಫ್ಟ್ ಅನುಮೋದನೆ ಮಾಡುವುದಾಗಿ ನಿಶ್ಚಯಿಸಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಬಗ್ಗೆ ಚರ್ಚಿಸಲಾಯಿತು.

Latest Indian news

Popular Stories