ಉಡುಪಿ: ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಲ ಕೊರೆತದಿಂದ ಸಾಕಷ್ಟು ಹಾನಿಗೊಳಗಾಗಿರುವ ಪಡುಬಿದ್ರಿ ಬೀಚ್ ಬಳಿ ತೆರಳಿ ಪರಿಶೀಲನೆ ನಡೆಸಿದರು.ಪಡುಬಿದ್ರಿ ಗ್ರಾಮಸ್ಥರು ಕಾಮಿನಿ ನದಿ ಹಾಗೂ ಸಮುದ್ರ ಮಾರ್ಗ ಮಧ್ಯೆ ತಡೆಗೋಡೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. ಅವರ ಮನವಿಯನ್ನು ಸ್ವೀಕರಿಸಿ, ಪರ್ಯಾಯ ವ್ಯವಸ್ಥೆಯನ್ನು ಮಾಡಿ ಕೊಡುವ ಬಗ್ಗೆ ಚರ್ಚಿಸಿದರು.
ಇದೇ ವೇಳೆ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
