ಉಡುಪಿ: ಮನೆಯ ಮಾಡಿನಿಂದ ಬಿದ್ದು ಮೃತ್ಯು

ಉಡುಪಿ, ಜ.18: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ರಾಮಕೃಷ್ಣ ಪಡಿಯಾರ್(64) ಮೃತ ದುರ್ವೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories