ಉಡುಪಿ | ಮಾಂಗ್ರೋವ್ ವನದ ಮಧ್ಯೆ ಕಯಾಕಿನ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

ವಿಧಾನಸಭಾ ಸಾರ್ವತ್ರಿಕಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

IMG 20230428 WA0027 Udupi
IMG 20230428 WA0031 Udupi

ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ, ಸಾಲಿಗ್ರಾಮದಸೀತಾ ನದಿಯ ಹಿನ್ನೀರಿನಲ್ಲಿ ನಡುವಿನ ದಟ್ಟಕಾಂಡ್ಲಾವನದ ನಡುವೆಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನಜಾಗೃತಿಯ ಸಂದೇಶವನ್ನು ಸಾರಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ ,ಜಿಲ್ಲಾ ಚುನಾವಣಾದಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ್ ಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ, ಪ್ರೋಬೇಷನರಿ ಐ.ಎ.ಎಸ್ಅಧಿಕಾರಿ ಯತೀಶ್, ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ನೈತಿಕ ಮತದಾನ ಪ್ರತಿಜ್ಞೆಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತಾ ಉಪಕರಣಗಳನ್ನು ಧರಿಸಿ ಕಯಾಕಿಂ್ ಆರಂಭಿಸಿದರು.

ಸುಮಾರು 30 ನಿಮಿಷಗಳ ಕಯಾಕಿಂಗ್ ನಂತರ ಮಾಂಗ್ರೋವ್ ಕಾಡುಗಳ ಮಧ್ಯೆಇರುವ ಪ್ರದೇಶದಲ್ಲಿ ಸುಮಾರು 40 ಕ್ಕೂ ಹೆಚ್ಚು ಕಯಾಕ್ದೋಣಿ ಗಳ ಮೂಲಕ ಮತದಾನ ದಿನವಾದ, ಮೇ 10 ದಿನಾಂಕದ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.

ಕಯಾಕಿಂಗ್ ನ ಆರಂಭದ ಸ್ಥಳದಿಂದ ನದಿ ಮಧ್ಯದಕಾರ್ಯಕ್ರಮ ನಡೆಯವ ಸ್ಥಳದ ವರೆಗೂ ನದಿಯಲ್ಲಿ ಮತದಾನಜಾಗೃತಿ ಸಾರುವ ಯಕ್ಷಗಾನ ಮುಖುಟ ಮಾದರಿಯ ಆಕೃತಿಗಳು ಗಮನ ಸೆಳೆದವು.
ಇದೇ ಸಂದರ್ಭದಲ್ಲಿ, ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕೆರೆಕಾಲೇಜಿನ ವಿದ್ಯಾರ್ಥಿಗಳಿಗೆ ವುತದಾರರ ಪ್ರತಿಜ್ಞಾ ವಿಧಿ ಭೋಧಿಸಿ,ಮತದಾನ ದಿನಾಂಕವನ್ನು ಒಳಗೊಂಡ ಬಲೂನ್ಗಳನ್ನು ಹಾರಿಬಿಡುವ ಮೂಲಕ ಕೂಡಾಜಾಗೃತಿ ಮೂಡಿಸಲಾಯಿತು.

ಈ ವಿಶಿಷ್ಠ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಕಿಂಗ್ ಪಾಯಿಂಟ್ ನಲ್ಲಿಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬ್ಬಂದಿ ಅಗತ್ಯ ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.

” ರಾಜ್ಯದಲ್ಲೇಇದೇ ಮೊದಲ ಬಾರಿಗೆ ಹಿನ್ನಿರಿನಲ್ಲಿ ಮಾಂಗ್ರೋವ್ ವನದ ನಡುವೆ ಕಯಾಕ್ ಗಳ ಮೂಲಕ ವಿಶಿಷ್ಠ ಮತ್ತು ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರವಾಸಿ ತಾಣಗಳು ಹಾಗೂ ಸಾಹಸ ಚಟುವಟಿಕೆಗಳು ನಡೆಯುವ ಸ್ಥಳಗಳು ಯುವಜನತೆಯನ್ನು ಹೆಚ್ಚು ಆಕರ್ಷಿಸಲಿದ್ದು, ಇಲ್ಲಿ ನಡೆಸುವ ಮತದಾನ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಸೆಳೆಯಲು ಸಹಕಾರಿಯಾಗಲಿದೆ”

ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ

Latest Indian news

Popular Stories