ಉಡುಪಿ, ಜೂ.25: ಕೆಲಸದ ಸಿಗದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮೆಕ್ಯಾನಿಕಲ್ ಇಂಜಿನಿಯರ್ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲಾಸ್ಪತ್ರೆಯ ಫಾರ್ಮಾಸಿಸ್ಟ್ ಉಮೇಶ ನಾರಾಯಣ ಭಿರ್ತಿ ಎಂಬವರ ಮಗ ಆಯುಷ್(22) ಎಂಬವರು ಮೆಕ್ಯಾನಿಕಲ್ ಇಂಜಿನಿಯ ರಿಂಗ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದು, ಕೆಲಸ ಸಿಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಜೂ.24ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಸ್ಪತ್ರೆಗೆ ಬಂದ ಆಯುಷ್, ಹೊರಗಡೆ ತಿರುಗಾಡಿ ಬರುವುದಾಗಿ ಹೇಳಿ ಹೋದವರು ನಾಪತ್ತೆ ಯಾಗಿದ್ದಾರೆ. ಇವರು ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ