ಉಡುಪಿ: ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವಿಗೆ ಸೂಚನೆ


ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಕ್ಕೆ ಯೋಗ್ಯವಲ್ಲದ ಹಾಗೂ ಶಿಥಿಲಗೊಂಡಿರುವ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಮಾಲಕರು ತಮ್ಮ ಸ್ವಂತ ವೆಚ್ಚದಲ್ಲಿ 30 ದಿನಗಳ ಒಳಗೆ ತೆರವುಗೊಳಿಸಬೇಕು.

ತಪ್ಪಿದ್ದಲ್ಲಿ ಯಾವುದೇ ಅನಾಹುತ ಮತ್ತು ಜೀವಹಾನಿಗಳು ಸಂಭವಿಸಿದ್ದಲ್ಲಿ ಮಾಲಕರೇ ಜವಾಬ್ದಾರರಾಗಿರುತ್ತಾರೆ ಹಾಗೂ ನಗರಸಭೆಯಿಂದ ನೀಡಲಾಗಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹಿಂಪಡೆಯಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Latest Indian news

Popular Stories