ಉಡುಪಿ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆ: ಶಾಸಕ ರಘುಪತಿ ಭಟ್ ಕಾಮಗಾರಿ ಪರಿಶೀಲನೆ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ದಿನಾಂಕ 18-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಸ್ಥಳಕ್ಕೆ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಟಿ. ಪ್ರಸನ್ನ ಕುಮಾರ್, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.

Latest Indian news

Popular Stories