ಕಾಪು, ಫೆ.6: ಉದ್ಯಾವರ ಸಮೀಪದ ಹೊಳೆಯಲ್ಲಿ 40-50ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಈ ವ್ಯಕ್ತಿ ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೃತಪಟ್ಟು, ನೀರಿನಲ್ಲಿ ಕೊಚ್ಚಿಕೊಂಡು ಬಂದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹ ವನ್ನು ಸಾಗಿಸಲು ಸಮಾಜ ಸೇವಕ, ಮುಳುಗು ತಜ್ಞ ಈಶ್ವರ್ ಮಲ್ಪೆ ಸಹಕರಿಸಿ ದರು. ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡ ಲಾಗಿದೆ. ವಾರೀಸುದಾರರು ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿ