ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ ಉದ್ಯಾವರ ಇದರ ಮಾಜಿ ಅಧ್ಯಕ್ಷ ನಿಧನ

ಉಡುಪಿ : ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ ಉದ್ಯಾವರ ಇದರ ಮಾಜಿ ಅಧ್ಯಕ್ಷ ರಾಮ ಪೂಜಾರಿ ಕುತ್ಪಾಡಿ (55) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

32ಕ್ಕೂ ಅಧಿಕ ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಎಸ್.ಡಿ.ಎಂ. ಆಟೋ ಚಾಲಕರ ಮತ್ತು ಮಾಲಕರ ಸಂಘದಲ್ಲಿ ಸಕ್ರಿಯರಾಗಿದ್ದು, ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು ನಾಲ್ಕು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿಯ ಪ್ರತಿಷ್ಠಿತ ಯಶೋಧ ಆಟೋ ಯೂನಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಅತ್ಯಂತ ಶ್ರಮಜೀವಿಯಾಗಿದ್ದರು.

ಎಸ್ ಡಿ ಎಂ ಆಟೋ ಚಾಲಕರ ಮತ್ತು ಮಾಲಕರ ನಿಲ್ದಾಣಕ್ಕೆ ಅಗತ್ಯವಿದ್ದ ಮೇಲ್ಚಾವಣಿಯನ್ನು ಅಂದಿನ ಸಚಿವ ಪ್ರಮೋದ್ ಮಧ್ವರಾಜ್‍ರವರ ಮೂಲಕವಾಗಿ ದೊರಕಿಸಿಕೊಳ್ಳಲು ಅತ್ಯಂತ ಶ್ರಮಪಟ್ಟು ಯಶಸ್ವಿಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Latest Indian news

Popular Stories