ಎ. 17ರಂದು ಉಡುಪಿ ವಿಧಾನಸಭಾ ಕ್ಷೇತ್ರ ದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಎ.17ರಂದು ಸೋಮವಾರ ಬೆಳಿಗ್ಗೆ 9 .00 ರಿಂದ 11:30ರ ಒಳಗೆ ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆˌ

ಪ್ರಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆದು ಹಿರಿಯ ನಾಯಕರು ˌರಾಜ್ಯ ನಾಯಕರು ˌಜಿಲ್ಲಾ ಮಟ್ಟದ ನಾಯಕರು ಹಾಗೂ ಸಾವಿರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರುˌ ಈ ಸಂದರ್ಭದಲ್ಲಿ ಪಕ್ಷದ ಹಿರಿಯರು ನಾಯಕರು ರಾಜ್ಯ ನಾಯಕರು ಜಿಲ್ಲಾ ಮಟ್ಟದ ನಾಯಕರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

Latest Indian news

Popular Stories