ಮಡಿಕೇರಿ ಏ.28(ಕರ್ನಾಟಕ ವಾರ್ತೆ):-ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿನೂತನ ರೀತಿಯಲ್ಲಿ ಆಯೋಜಿಸಿರುವ ಮತದಾರರ ಶಿಕ್ಷಣ, ಅರಿವು ಹಾಗೂ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಶೇಷವಾಗಿ ಸಂಜೆ 7.15 ರಿಂದ 30 ನಿಮಿಷಗಳ ಕಾಲ ಬಸವರಾಜ ಬಡಿಗೇರ್ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವದ ಸಂದೇಶವನ್ನು ಎಲ್ಲರಿಗೂ ತಲುಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಕೋರಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.