ಕಾಪು : ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು
ಮಾಲಿಕರಿಂದ 6ಲಕ್ಷ ರೂ. ದೋಚಿದ ಆರೋಪಿಯನ್ನು
ಕಾಪು ಪೊಲೀಸರು ಬಂಧಿಸಿದ್ದಾರೆ.
ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಿಕರಿಂದ 6ಲಕ್ಷ ಹಣ ದೋಚಿ
ಪರಾರಿಯಾಗಿದ್ದ ನಂತರ ಆರೋಪಿಯ ಶೋಧ ಕಾರ್ಯ ಮುಂದುವರಿದಿತ್ತು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ರಾಘವೇಂದ್ರ ಕಿಣಿ ಅವರು ದೂರು ನೀಡಿದ್ದರು. ಕೂಡಲೇ ಕಾರ್ಯಾಚರಣೆಗಿಳಿದ ಕಾಪುವಿನ ಪೊಲೀಸರ ತಂಡ ಆರೋಪಿಯನ್ನು ಇದೀಹ ಬಂಧಿಸಿ ಅಂಗಡಿಗೆ ಕರೆತಂದು
ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.