ಕಾಪು, ಫೆ.9: ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಕಾಪುವಿನ ಯುವ ಛಾಯಾಗ್ರಾಹಕ ಪೊಲಿಪು ನಿವಾಸಿ ಪ್ರೀತೇಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗಿನ ಜಾವಾ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರು ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಅಲ್ಲಿಂದ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಪ್ರೀತಿಶ್ ಕಾಪು ಛಾಯಾಗ್ರಹಕ ಸಂಘದ ಅಜೀವ ಸದಸ್ಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾ