ಉಡುಪಿ, ಎ.18: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಾವಿರಾರು ಕಾರ್ಯಕರ್ತರ ಜಾಥದೊಂದಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು.
ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಸಾವಿರಾರು ಮಂದಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ ಕಾಂಗ್ರೆಸ್ ಕಛೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿದರು.
ಅಲ್ಲಿಂದ ಅವರು ಕಾಪು ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾ ಎಂ.ಎ. ಗಫೂರ್, ಕಾಪು ದಿವಾಕರ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು