ಕಾರ್ಕಳ: ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟು ಟವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ .
ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಸಫಲಿಗ ಮಾನಸಿಕ ನೊಂದು ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.