ಕಾರ್ಕಳ : ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಡುಪಿ: ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ವರದಿಯಾಗಿದೆ.

ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿದ್ದಾಗ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories