ಕಾರ್ಕಳ: ವಿಹಾರಕ್ಕೆಂದು ಬಂದಿದ್ದ ವಿಜಯನಗರ ಶಾಲೆಯ ಹಲವಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾಗಿ ಗಾಯಗೊಂಡಿರುವ ಘಟನೆ ಧರ್ಮಸ್ಥಳ-ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಬಳಿ ಸೋಮವಾರ ನಡೆದಿದೆ.
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳಿದ್ದರು.
ಘಟನೆಯಲ್ಲಿ ಮೂವರು ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.