ಕಾರ್ಕಳ: ಸುನೀಲ್ ಕುಮಾರ್ ನಾಮಪತ್ರ ಸಲ್ಲಿಕೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಕಾರ್ಕಳದ ಸ್ವರಾಜ್ಯ ಮೈದಾನದಿಂದ ಕಾಲ್ನಡಿಗೆ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ತಾಲೂಕು ಪಂಚಾಯತ್ ಮೈದಾನಕ್ಕೆ ಆಗಮಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು. ನಂತರ ಅಲ್ಲಿಂದ ತಾಲ್ಲೂಕು ಕಛೇರಿ ತೆರಳಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.

IMG 20230419 WA0039 Udupi
IMG 20230419 WA0046 Udupi

ಈ ಸಂಧರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಶಾಸಕ ರಘಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್, ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ಗೇರು ಅಭಿವ್ರದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಪುರಂದರ ಶೆಟ್ಟಿ ಪೂನಾ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಹರೀಶ್ ಶೆಟ್ಟಿ, ಬೋಳ ಪ್ರಭಾಕರ್ ಕಾಮತ್, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷ ಪ್ರವೀಣ್ ಶೆಟ್ಟಿ, ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ, ನ್ಯಾಯವಾದಿ ಎಂ ಕೆ ವಿಜಯ ಕುಮಾರ್, ರವೀಂದ್ರ ಶೆಟ್ಟಿ ಬಜಗೋಳಿ, ನವೀನ ನಾಯಕ್ ನಿಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Latest Indian news

Popular Stories