ಕುಂದಾಪುರ: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕುಂದಾಪುರ: ನಗರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಕುಂದಾಪುರದ ರಾಘವೇಂದ್ರ ಶೇರುಗಾರ್ ಯಾನೆ ಬನ್ಸ್ ರಾಘು(42) ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಮೂಲಕ ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಾಗುತ್ತಿರುವಾಗ ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದನು ಎಂದು ದೂರಲಾಗಿದೆ.

ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ ರಾಘವೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ, ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.ಮೇಲ್ನೋಟಕ್ಕೆ ಪೂರ್ವ ದ್ವೇಷದಿಂದಲೇ ರಾಘು ಅವರ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ

Latest Indian news

Popular Stories