ಕುಂದಾಪುರ: ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಕುಂದಾಪುರ: ಮೂರು ಜಾನುವಾರುಗಳನ್ನು ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಜಾನುವಾರುಗಳನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದ ಕುದ್ರುಬೆಟ್ಟು ಎಂಬಲ್ಲಿ ಜೂ.24 ಶನಿವಾರ ನಡೆದಿದೆ.

IMG 20230624 WA0059 Udupi

ಕುಂದಾಪುರ ಜಪ್ತಿ ಕರಿಕಲ್ಕಟ್ಟೆಯ ಚಂದ್ರಶೆಟ್ಟಿ (55), ಹಳ್ಳಾಡಿ ಗುಡ್ಡೆಯಂಗಡಿ ನಿವಾಸಿ ಅಣ್ಣಪ್ಪ (65) ಬಂಧಿತ ಆರೋಪಿಗಳು.

ಆರೋಪಿಗಳು ಗೂಡ್ಸ್ ವಾಹನದಲ್ಲಿ ಯಾವುದೇ ಪರವಾನಿಗೆಯಿರದ ಮೂರು ಗಂಡು ಕರುಗಳನ್ನು ಮೇವು ಬಾಯಾರಿಕೆ ನೀಡದೇ, ಹಿಂಸಾತ್ಮಕವಾಗಿ ತುಂಬಿಸಿ ವಧೆ ಮಾಡಲು ಕುದ್ರುಬೆಟ್ಟು ಎಂಬಲ್ಲಿ ಕುಚ್ಚಾಳ ಕಡೆಯಿಂದ ಕುಂದಾಪುರ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಸಿಕ್ಕ ಖಚಿತ ವರ್ತಮಾನದಂತೆ ಶಂಕರನಾರಾಯಣ ಪಿಎಸ್ಐ ನಾಸೀರ್ ಹಾಗೂ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories