ಕುಂದಾಪುರ, ಆ.30: ಎನ್‌ಎಚ್ 66ರ ಡಿವೈನ್ ಪಾರ್ಕ್ ಸಾಲಿಗ್ರಾಮದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ ಬೈಕ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗುಂಡ್ಮಿ ಭಗವತಿ ರಸ್ತೆ ನಿವಾಸಿ ಕೇಶವ ಮರಕಾಲ (41) ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಕುಂದಾಪುರ ಕಡೆಗೆ ಕಾರನ್ನು ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಕೂಡ ಪಲ್ಟಿಯಾಗಿದೆ.
ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.