ಕುಂದಾಪುರ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು, ಸವಾರನಿಗೆ ಗಾಯ

ಕುಂದಾಪುರ, ಜ.15: ಕೋಣಿ ಗ್ರಾಮದ ಕಟ್ಕೇರಿಯ ಶಂಕರ ಮಡಿವಾಳರ ಹೊಟೇಲ್ ಬಳಿ ಜ.14ರಂದು ಸಂಜೆ ವೇಳೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಚಂದ್ರ ಕುಮಾರ್ ಮೃತ ದುದೈರ್ವಿ. ಪ್ರದೀಪ್ ಎಂಬವರು ಸವಾರಿ ಮಾಡಿ ಕೊಂಡು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಬೈಕ್, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರ ಕುಮಾರ್ಗೆ ಡಿಕ್ಕಿ ಹೊಡೆಯಿತು. ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಂದ್ರ ಕುಮಾರ್ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟರು. ಇದೇ ವೇಳೆ ಬೈಕ್ ಪಲ್ಟಿಯಾಗಿ ಗಾಯಗೊಂಡ ಬೈಕ್ ಸವಾರ ಪ್ರದೀಪ್ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Latest Indian news

Popular Stories