ಕುಂದಾಪುರ: ಶಾಲೆಗೆ ಅನಧಿಕೃತ ಗೈರು- ಸರಕಾರಿನೌಕರ ಸಂಘದ ಜಿಲ್ಲಾಧ್ಯಕ್ಷ ಸಹಿತ ಇಬ್ಬರು ಶಿಕ್ಷಕರ ಅಮಾನತು


ಕುಂದಾಪುರ, ಆ.17: ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತ ವಾಗಿ ನಿರಂತರ ಶಾಲಾ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಕಾರಣಕ್ಕೆ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಸಹಿತ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಆದೇಶ ಹೊರಡಿಸಿದ್ದಾರೆ.


ಕ್ಷಕ ಅಂಪಾರು ದಿನಕರ ಶೆಟ್ಟಿ ಶಾಲೆಗೆ ಬರುತ್ತಿಲ್ಲ ಮತ್ತು ಇದರಿಂದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದಾಗ ಶಿಕ್ಷಕ ಶಾಲೆಯಲ್ಲಿ ಇರದೇ, ಹಾಜರಿ ಯನ್ನೂ ಹಾಕದೇ, ಮೇಲಧಿಕಾರಿಗಳ ಗಮನಕ್ಕೂ ತಾರದೇ ಗೈರಾಗಿರುವುದು ಕಂಡು ಬಂದಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅಂಪಾರು ದಿನಕರ ಶೆಟ್ಟಿ ಹಾಗೂ ಗೈರಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ಶಿಕ್ಷಕ ದಿನಕರ ಶೆಟ್ಟಿಗೆ ಬೆಂಬಲ ನೀಡಿದ ಕಾರಣಕ್ಕೆ ಅದೇ ಶಾಲೆಯ ಮುಖ್ಯೋಪಾಧ್ಯಾಯ ಜನಾರ್ದನ ಪಟಗಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ

Latest Indian news

Popular Stories