ಅಮಾಸ್ಸೆಬೈಲು, ಫೆ.24: ಕೃಷಿ ಸಾಲ ತೀರಿಸಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.24ರಂದು ಬೆಳಗ್ಗೆ 6ಗಂಟೆ ಸುಮಾರಿಗೆ ಮಚ್ಚಟ್ಟು ಗ್ರಾಮದ ಹೊನದನೆ ಮನೆಜೆಡ್ಡು ಎಂಬಲ್ಲಿ ನಡೆದಿದೆ.
ಮನೆಜೆಡ್ಡು ನಿವಾಸಿ ರಾಜೇಶ್ ಮೃತ ರೈತ. ಇವರು ಹಂಚಿಕಟ್ಟೆ ಅಂಚೆ ಕಚೇರಿಯಲ್ಲಿ ತಾತ್ಕಾಲಿಕ ಪೋಸ್ಟಮೆನ್ ಆಗಿ ಕೆಲಸ ಮಾಡಿಕೊಂಡಿದ್ದು, ಕೃಷಿ ಕೆಲಸದ ಬಗ್ಗೆ ಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲಾಗದೆ ಮನನೊಂದ ಅವರು, ಮನೆಯ ಎದುರಿನ ದನದ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ