ಉಡುಪಿ, ಫೆ.22: ನಾಯರ್ಕೆರೆ ವಾಣಿಜ್ಯ ತೆರಿಗೆಗಳ ಭವನದ ಎದುರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿರುವ ಘಟನೆ ಫೆ.22ರಂದು ಬೆಳಗ್ಗೆ ನಡೆದಿದೆ.
ಬ್ರಹ್ಮಗಿರಿಯ ವಿಜಯ ಜೆ.ಎಸ್.(61) ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬೈಕಿನಲ್ಲಿ ಬಂದ ಇಬ್ಬರು ಯುವಕರು, ವಿಜಯ ಅವರ ಕುತ್ತಿಗೆಗೆ ಕೈ ಹಾಕಿ ತಳ್ಳಿ, ನೆಲಕ್ಕೆ ಬೀಳಿಸಿ, 50 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇದರ ವೌಲ್ಯ 2,50,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ