ನೆರೆ ಹಾನಿ ಕಾಮಗಾರಿಗಳಿಗೆ ಉಡುಪಿ ಕ್ಷೇತ್ರಕ್ಕೆ ರೂ. 25 ಕೋಟಿ ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ.

ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದಾಗಿ ಉಡುಪಿ ಕ್ಷೇತ್ರದ ಹಲವು ಭಾಗಗಳಲ್ಲಿ ನೆರೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಸರ್ಕಾರದ ಮೂಲಕ ರೂ. 25 ಕೋಟಿ ಅನುದಾನ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗಿದ್ದು, ತೀವ್ರ ಮಳೆಯಿಂದಾಗಿ ಸೇತುವೆ, ನದಿ ದಂಡೆ, ರಸ್ತೆ, ಚರಂಡಿ, ವಿದ್ಯುತ್ ಕಂಬ ಹಾಗೂ ಕಾಲು ಸಂಕಗಳು ಹಾನಿಗೀಡಾಗಿದೆ.

ಮಳೆ ಸಂಬಂಧಿತ ತುರ್ತು ಕಾಮಗಾರಿಗಳಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ನಿಧಿಯಿಂದ ಗರಿಷ್ಠ ಅನುದಾನ ಮಂಜೂರು ಮಾಡಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Latest Indian news

Popular Stories