ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಗೆ ಪರ್ಕಳ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಬಗೆಯ ಅಡೆತಡೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಿ, ನಿಗಧಿತ ಅವಧಿಯೊಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟಿçÃಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ನಿಂದ ತಡೆ ಇರುವ ಬಗ್ಗೆ ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು. ಕಾಮಗಾರಿಯ ಅನುಷ್ಠಾನಕ್ಕೆ ಈಗಾಗಲೇ ಸಾಕಷ್ಟು ಸಾರ್ವಜನಿಕ ಮೊತ್ತವನ್ನು ವೆಚ್ಚ ಮಾಡಿದ್ದು, ಕಾಮಗಾರಿಯು ಸ್ಥಗಿತಗೊಂಡರೆ ಮಳೆಗಾಲದ ವೇಳೆಯಲ್ಲಿ ಇದುವರೆಗೆ ಮಾಡಿರುವ ಕಾಮಗಾರಿ ಹಾಳಾಗುವ ಜೊತೆಗೆ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಸಹ ತೀವ್ರ ತೊಂದರೆಯಾಗಲಿದ್ದು, ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಈ ಬಗ್ಗೆ ವಕೀಲರ ಮೂಲಕ ಚರ್ಚಿಸಿ, ಕಾನೂನು ವ್ಯಾಪ್ತಿಯಲ್ಲಿ ಪ್ರಕರಣವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ, ಕಾಮಗಾರಿ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಯ ಭೂ-ಸ್ವಾಧೀನ ಪ್ರಕರಣಗಳಿಗೆ ಸಂಬAಧಿಸಿದAತೆ ಜಮೀನು ಮಾಲೀಕರುಗಳಿಗೆ ಸೂಕ್ತ ಪರಿಹಾರದ ಮೊತ್ತವನ್ನು ಆದ್ಯತೆಯಲ್ಲಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭೂ-ಸ್ವಾಧೀನಕ್ಕೆ ಸಂಬAಧಪಟ್ಟ ದಾಖಲೆಗಳಲ್ಲಿ ದೋಷಗಳಿದ್ದಲ್ಲಿ ತಕ್ಷಣದಲ್ಲಿ ಇತ್ಯರ್ಥಪಡಿಸುವಂತೆ ಭೂ ಧಾಖಲೆಗಳ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದು ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಉಡುಪಿ ತಹಸೀಲ್ದಾರ್ ಭೀಮಸೇನ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ರಾಷ್ಟಿçÃಯ ಹೆದ್ದಾರಿ 169ಎ ನ ಇಂಜನಿಯರ್ ನಾಗರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.