ಪ್ರಿಯಾಂಕ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ – ಕ್ರಮಕ್ಕೆ ಕಾಂಗ್ರೆಸ್ ಎಸ್ಪಿಗೆ ಮನವಿ

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿರಿಸಿಕೊಂಡು ಕಿಡಿಗೇಡಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುತ್ತಾರೆ ˌಈ ಹೇಳಿಕೆಗಳಿಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ˌ ಈ ಹಿನ್ನೆಲೆಯಲ್ಲಿ ಮಾನ್ಯ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಹೇಳಿಕೆ ನೀಡಿ ಜಾಲತಾಣದಲ್ಲಿ ಹರಿಯಬಿಟ್ಟ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ರೋಷನ್ ಶೆಟ್ಟಿ ಅವರು ಮನವಿಯನ್ನು ಅರ್ಪಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಹರೀಶ್ ಶೆಟ್ಟಿ ಪಂಗಾಳˌ ಭಾಸ್ಕರ್ ರಾವ್ ಕಿದಿಯೂರು ˌ ಬಿ.ಕುಶಲ ಶೆಟ್ಟಿ ˌ ಪ್ರಖ್ಯಾತ್ ಶೆಟ್ಟಿ ˌಯತೀಶ್ ಕರ್ಕೇರ ˌನಾಗೇಶ್ ಕುಮಾರ್ ಉದ್ಯಾವರ ಜಯಕುಮಾರ್ ಹಾಗೂ NSUI ‘ IYC ಪದಾಧಿಕಾರಿಗಳು ಉಪಸ್ಥಿತಿಯಲ್ಲಿದ್ದರು

Latest Indian news

Popular Stories