ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ

ಜಿಲ್ಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟ ಹಾಗೂ ಕಾರ್ನರ್ ಮೀಟಿಂಗ್ ಗಳ ಮೂಲಕ ಜನತೆ ಕಾಂಗ್ರೆಸ್ಸಿನ ನಕಲಿ ಗ್ಯಾರಂಟಿ ಕಾರ್ಡ್ ಜಾಲದಿಂದ ಮೋಸ ಹೋಗದಂತೆ ಜಾಗೃತಿ ಮೂಡಿಸಿದ ಪರಿಣಾಮವಾಗಿ ದಾಖಲೆಯ ಅಂತರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ರಾಜ್ಯದ ಇತರ ಎಲ್ಲಾ ಜಿಲ್ಲೆಗಳಿಗೆ ತುಲನೆ ಮಾಡಿದಾಗ, ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸಿ, ಮಗದೊಮ್ಮೆ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಿದೆ.

ರಾಜ್ಯದಲ್ಲೇ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಉಡುಪಿ ಜಿಲ್ಲೆ ಹಿಂದುತ್ವದ ಭದ್ರ ಕೋಟೆ ಎಂಬುದನ್ನು ಸಾಬೀತುಪಡಿಸಿದೆ. ಈ ಯಶಸ್ಸಿಗೆ ಕಾರಣೀಭೂತರಾಗಿರುವ ಪಕ್ಷದ ಸಮಸ್ತ ಕಾರ್ಯಕರ್ತರಿಗೆ ಹಾಗೂ ಮತದಾರ ಬಾಂಧವರಿಗೆ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories