ಮಣಿಪಾಲ, ಎ.4: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.2ರಂದು ರಾತ್ರಿ ಮಣಿಪಾಲದಲ್ಲಿ ನಡೆದಿದೆ.
ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ.
ಮಣಿಪಾಲದ ಎಂಐಟಿ ವಿದ್ಯಾರ್ಥಿಯಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಾನು ವಾಸವಿದ್ದ ಹಾಸ್ಟೆಲ್ನ ಬಾತ್ ರೂಮ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.