ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ

ಮಲ್ಪೆ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ಬಿಹಾರ ಮೂಲದ ವ್ಯಕ್ತಿ ಒಬ್ಬರನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ

ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಬಿಹಾರದ ಜಿತೇಂದ್ರ 27 ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದ ಜಿತೇಂದ್ರ ನನ್ನು ಜೀವ ರಕ್ಷಕ ದಳ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ತಕ್ಷಣವೇ ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ

Latest Indian news

Popular Stories