ಮೇ 6 ಕ್ಕೆ ಉಡುಪಿಗೆ ಉ.ಪ್ರ ಮುಖ್ಯಮಂತ್ರಿ ಆದಿತ್ಯನಾಥ್ ಭೇಟಿ

ಉಡುಪಿ: ಮೇ 6ಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಮೇ 6 ರಂದು ಬೆಳಗ್ಗೆ ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಪುತ್ತೂರಿಗೆ 12.30ಕ್ಕೆ ಆಗಮಿಸಲಿದ್ದಾರೆ. ಅನಂತರ ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ, ಮಧ್ಯಾಹ್ನ 3.30ಕ್ಕೆ ಕಾರ್ಕಳ, 5 ಗಂಟೆಗೆ ಹೊನ್ನಾವರಕ್ಕೆ ಭೇಟಿ ನೀಡಲಿದ್ದು, ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್‌ ಶೆಟ್ಟಿ ಕಿದಿಯೂರು ತಿಳಿಸಿದ್ದಾರೆ.

Latest Indian news

Popular Stories