ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತಿದ್ದು ತೀರ್ಥಹಳ್ಳಿಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯದಿಂದ ಕಿಮೀ ಗಟ್ಟಲೆ ನಿಂತುಕೊಂಡ ಘಟನೆ ಶುಕ್ರವಾರ ಸಂಜೆ ಐದು ಗಂಟೆಯ ಸುಮಾರಿಗೆ ನಡೆದಿದೆ.
ನಂತರ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.