ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ತನಿಕಾ ಅಧಿಕಾರಿಯಾಗಿ ಕುಂದಾಪುರ ಡಿಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ
ಈ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಕಾ ಅಧಿಕಾರಿಯಾಗಿ ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ಕಾರ್ಯನಿರ್ವಹಿಸುತ್ತಿದ್ದರು.
ಇದೀಗ ತನಿಖಾಧಿಕಾರಿಯನ್ನು ಬದಲಾಯಿಸಿ, ಅವರ ಬದಲು ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಿ ಜಿಲ್ಲಾ ಪೊಲೀಸ್ ಅಧಿಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ