ಉಡುಪಿ | ಸ್ನಾನಗೃಹದಲ್ಲಿ ಕುಸಿದು ಬಿದ್ದ ಮಹಿಳೆ ಸಾವು.

ಉಡುಪಿ, ಮೇ.8; ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆರೊಬ್ಬರು ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯು ಪುತ್ತೂರು ಅಂಬಾಗಿಲಿನ ಅಂಬೇಡ್ಕರ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. 

ಮೃತ ಮಹಿಳೆಯನ್ನು ಸಲ್ನಾಥ್ (51ವ) ಎಂದು ಗುರುತಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಸ್ಥಳೀಯರ ಸಹಕಾರದಿಂದ ಹೊರ ತಂದು, ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಠಾಣೆಯ ಸುಷ್ಮಾ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು.

Latest Indian news

Popular Stories