ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ


ಉಡುಪಿ: ನಗರಸಭೆಯಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆಬಳಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದುದಾಳಿ ನಡೆಸಿ ೩೪೬ ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ೧೦,೦೦೦ರೂ.ದಂಡ ಹಾಗೂ ಅಜ್ಜರಕಾಡು ಪಾರ್ಕ್ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ೫೦೦೦ ರೂ. ದಂಡ ವಿಧಿಸಿದರು.


ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರಅಭಿಯಂತರರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.


ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದುಕಂಡು ಬಂದಲ್ಲಿಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ,ದಂಡ ವಿಧಿಸಲಾಗುವುದುಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!