ಬೋವಿ ನಿಗಮದಲ್ಲಿ ₹100 ಕೋಟಿ ಅವ್ಯವಹಾರ; ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಗೂಳಿಹಟ್ಟಿ ಶೇಖರ್ ಆರೋಪ

ಚಿತ್ರದುರ್ಗ, ಜೂನ್.06: ಬೋವಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ (Goolihatti Shekar) ಗಂಭೀರ ಆರೋಪ ಮಾಡಿದ್ದಾರೆ. ಬೋವಿ ನಿಗಮದಲ್ಲಿ ₹100 ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಗೂಳಿಹಟ್ಟಿ ಶೇಖರ್ ಅವರು ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ವಿರುದ್ಧ ಆರೋಪ ಮಾಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ನೂತನ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ. ಸಿಬಿಐ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಮಾಡಿದ್ದು ಎಲ್ಲಿಂದ ಬಂತು? ಎಸ್​​ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ. ಬಿಎಸ್ ಯಡಿಯೂರಪ್ಪ ಕೇಸ್ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್ ಕೇಸ್ ಮಾತ್ರ ತನಿಖೆ ಮಾಡ್ತೀರಾ ಎಂದು ಶೇಖರ್​​ ಕಿಡಿ ಕಾರಿದ್ದಾರೆ.

Latest Indian news

Popular Stories