ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ 2,76,000ರೂ. ಮೌಲ್ಯದ ಮಾದಕ ವಸ್ತು‌ ನಾಶ

ಉಡುಪಿ, ಫೆ.10: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ 2,76,000ರೂ. ಮೌಲ್ಯದ ಸುಮಾರು 6 ಕೆಜಿ 912 ಗ್ರಾಂ ತೂಕದ ಗಾಂಜಾವನ್ನು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆ. ಆಯುಷ್ ಎನ್ವಿರೋಟೆಕ್ ಪ್ರೈ. ಲಿಮಿಟೆಡ್ ನಲ್ಲಿ ನಾಶಪಡಿಸಲಾಯಿತು.

ಉಡುಪಿ ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ ಒಂದು ಪ್ರಕರಣಗಳು ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಅಧಿಕಾರಿಗಳು ನಾಶ ಪಡಿಸಿದರು.

ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷ ಡಾ.ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories