ಪಡುಬಿದ್ರಿ: ಸಾಮಾಜಿಕ ಜಾಲತಾಣಗಳಲ್ಲಿ ಬಸ್ ಚಾಲಕನಿಗೆ ಚೂರಿ ಇರಿತ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ, ಎ.29: ಪಡುಬಿದ್ರೆಯಲ್ಲಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ವಾಟ್ಸಾಪ್ನಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ 505(2) ರಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಬೆಳಗ್ಗೆ ಪಡುಬಿದ್ರೆಯಲ್ಲಿ ಓವರ್ಟೇಕ್ ವಿಚಾರದಲ್ಲಿ ಎಕ್ಸ್ಪ್ರೆಸ್ ಬಸ್ ಚಾಲಕ ಶೈಲೇಂದ್ರ ಎಂಬವರಿಗೆ ಕಾರು ಚಾಲಕ ಮುಲ್ಕಿಯ ಇಸ್ಮಾಯಿಲ್ ಆತೀಕ್ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಬಸ್ ಚಾಲಕನಿಗೆ ಚೂರಿ ಇರಿತ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪಡುಬಿದ್ರಿ ಪೊಲೀಸ್ ಠಾಣೆಯ ಈಗಾಗಲೇ 505(2) ರಂತೆ ಪ್ರಕರಣ ದಾಖಲಾಗಿದ್ದು, ಮುಂದಕ್ಕೆ ಈ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಹಬ್ಬಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

Latest Indian news

Popular Stories