ಮಣಿಪುರ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಉಡುಪಿಯಲ್ಲಿ ನಡೆಯಲಿದೆ ಬೃಹತ್ ಪ್ರತಿಭಟನೆ

ಉಡುಪಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಇತ್ತೀಚೆಗೆ ಮಣಿಪುರದ ಕುಕಿ ಜನಾಂಗದ ಮಹಿಳೆಯರ ನಗ್ನ ಮೆರವಣಿಗೆ, ಅತ್ಯಾಚಾರ ಪ್ರಕರಣ ಖಂಡಿಸಿ ಸಮಾನ ಮನಸ್ಕ ವೇದಿಕೆ ಬೃಹತ್ ಪ್ರತಿಭಟನೆಯನ್ನು ಇಂದು (ಬುಧವಾರ) ಆಯೋಜಿಸಿದೆ.

ಉಡುಪಿಯ ನಗರ ಭಾಗದ ಮದರ್ ಆಫ್ ಸಾರೋಸ್ ಚರ್ಚ್ ನಿಂದ ಸರ್ವಿಸ್ ಬಸ್ ಸ್ಟ್ಯಾಂಡ್ ಆಗಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನಕ್ಕೆ ಪ್ರತಿಭಟನಾ ಜಾಥ ಹೊರಡಲಿದ್ದು ಸುಮಾರು 7 ಸಾವಿರ ಮಂದಿ ಭಾಗವಹಿಸಲಿರುವ ಕುರಿತು ಆಯೋಜಕರು ತಿಳಿಸಿದ್ದಾರೆ.

ಮಧ್ಯಾಹ್ನ 2.30 ಕ್ಕೆ ಮೆರವಣಿಗೆ ಪ್ರಾರಂಭವಾಗಲಿದ್ದು ನಾಲ್ಕು ಗಂಟೆಗೆ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಇದರಲ್ಲಿ ಖ್ಯಾತ ಅಂಕರಣಕಾರ ಶಿವಸುಂದರ್ ಮಾತನಾಡಲಿದ್ದಾರೆ. ಅದರೊಂದಿಗೆ ಹಲವಾರು ಗಣ್ಯರು ಈ ಸಭೆಯಲ್ಲಿ ಭಾಗವಹಿಸಲಿರುವ ಕುರಿತು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest Indian news

Popular Stories