ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯನ್ನು ನಡೆಸಿ ಈ ಮೇಲ್ಕಂಡ ಆಗ್ರಹ ಪಾತ್ರವನ್ನು ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಮುಖ್ಯಮಂತ್ರಿ ಮತ್ತು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ತಲುಪಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಕಾರ್ಯದರ್ಶಿ ಶ್ರೀವತ್ಸ ಡಿ ಗಾಂವ್ಸ್ ಕರ್ ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಸಹ-ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್,ಕಿಶೋರ್,ನವೀನ್,ಪ್ರಸನ್ನ,ಭೂಷಣ್, ಅಕ್ಷಯ್ ಹೆಗ್ಡೆ, ಮಹೇಶ್ ಮತ್ತು ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.