Udupi

ಟ್ರ್ಯಾಕ್ಟರ್ ಗೆ ಆಂಬ್ಯೂಲೆನ್ಸ್ ಡಿಕ್ಕಿ: ಗರ್ಭಿಣಿ ಮೃತ್ಯು

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಅಂಬ್ಯೂಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಯೂಲೆನ್ಸ್ ನಲ್ಲಿದ್ದ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಹೂವಿನಹಿಪ್ಪರಗಿ ಬಳಿ ನಡೆದಿದೆ.
ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ (19) ಮೃತ ಗರ್ಭಿಣಿ. ಇನ್ನು ಕಳೆದ ಒಂದೂವರೆ ವರ್ಷದ ಹಿಂದೆ ತಾಳಿಕೋಟೆ ತಾಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀ ಮತ್ತು ರಾವುತಪ್ಪ ವಿವಾಹವಾಗಿತ್ತು. ಹೀಗಾಗಿ ಮೊದಲ ಹೆರಿಗೆಗಾಗಿ ತವರು ಮನೆಗೆ ಭಾಗ್ಯಶ್ರೀ ತೆರಳಿದ್ದರು.

ಇಂದು ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮವಾಗಿ ತವರು ಮನೆಯವರು ನಾವದಗಿಯಿಂದ ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು ಆದರೆ ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾದ ಕಾರಣ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಜಿಲ್ಲಾಸ್ಪತ್ರೆಗೆ ಆಂಬ್ಯೂಲೆನ್ಸ್ ನಲ್ಲಿ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದೆ.

ಪ್ರತಿಭಟನೆ:
ಇನ್ನು ಮೃತ ಭಾಗ್ಯಶ್ರೀ ಪೊಷಕರು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದರು. ಪ್ರತಿಭಟನೆ ವೇಳೆ ಪೋಷಕರು ವೈದ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದರು ಎನ್ನಲಾಗಿದೆ.

ಅಂಬ್ಯುಲೆನ್ಸ್ ನಲ್ಲಿದ್ದ ಇಬ್ಬರು ಸ್ಟಾಫ್ ನರ್ಸ ಹಾಗೂ ಓರ್ವ ಸಹಾಯಕನಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button