ಆಗುಂಬೆ ಘಾಟಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಆದೇಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಉಡುಪಿ ರಸ್ತೆಯ ಆಗುಂಬೆ ಘಾಟಿಯ 6,7 ಹಾಗೂ 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತವು ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿರುವುದು ಕಂಡು ಬಂದಿದ್ದು, ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ಸೂಕ್ತವಲ್ಲ ಹಾಗೂ ಇದರಿಂದ ರಸ್ತೆ ಮತ್ತಷ್ಟು ಕುಸಿದು
ಅಪಘಾತವಾಗುವ ಸಂಭವವಿರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ದಿನಾಂಕ:27-07-2023 ರಿಂದ 15-09-2023 ರವರೆಗೆ ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ವಾಹನ ಸಂಚಾರ ನಿಷೇಧಿಸಿ ಈ ಕೆಳಕಂಡ ಮಾರ್ಗಗಳಲ್ಲಿ ಸಂಚರಿಸಲು ಆದೇಶ ಹೊರಡಿಸುವಂತೆ ಕೋರಲಾಗಿದೆ.

ಸಂಚಾರ ಮಾರ್ಗ ಸದರಿಯವರ ಕೋರಿಕೆಯನ್ವಯ ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಲಂ 115 ಕರ್ನಾಟಕ ಮೋಟಾರು ನಿಯಾಮವಳಿಗಳು 1989ರ ಕಲಂ 221(ಎ)(2) & (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ದಿನಾಂಕ:27-07-2023 ರಿಂದ 15-09-2023 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸುವುದು ಅಗತ್ಯವೆಂದು ಮನಗಂಡು ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಭಾರೀ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶಿಸಿದೆ.

ಬದಲೀ ಮಾರ್ಗ:

ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ

ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ

Latest Indian news

Popular Stories