ಉಡುಪಿ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಯತ್ನ: ಉಡುಪಿ ಶಾಸಕರು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ | ಕಾಂಗ್ರೆಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಪರ ಘೋಷಣೆ

ಉಡುಪಿ: ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ನಗರದ ಬ್ರಹ್ಮಗಿರಿಯಲ್ಲಿ ಇಂದು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ನಡೆಸಲಾಯಿತು.

ಕಾಂಗ್ರೆಸ್ ಭವನಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್ ಹಾಗೂ ಕಾಂಗ್ರೆಸ್ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮುಖಂಡರಾದ ರಾಜೇಶ್ ಕಾವೇರಿ, ವೀಣಾ ಶೆಟ್ಟಿ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಖಂಡರಾದ ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಜಮಾವಣೆ:ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬಿಜೆಪಿಯ ಉಡುಪಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ ಜಮಾಯಿಸಿದರು.

ಬಳಿಕ ಕಾಂಗ್ರೆಸ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಖ್ಯಾತ್ ಶೆಟ್ಟಿ, ವರೋನಿಕಾ ಕರ್ನೆಲಿಯೊ ಮೊದಲಾದವರು ಉಪಸ್ಥಿತರಿದ್ದರು.

Latest Indian news

Popular Stories