Featured StoryUdupi

ಉಡುಪಿ | ಕರಾವಳಿ ಬೈಪಾಸ್‌ನಲ್ಲಿರುವ ಶಾರದ ಹೊಟೇಲ್‌ನ ಮಾಲಕ, ಬಿಜೆಪಿ ಮುಖಂಡ ಬಿ ಸುಧಾಕರ್ ಶೆಟ್ಟಿ ನಿಧನ

ಉಡುಪಿ, ಜ.4: ಹಿರಿಯ ಬಿಜೆಪಿ ಮುಖಂಡ ಬಿ.ಸುಧಾಕರ್ ಶೆಟ್ಟಿ(72) ಗುರುವಾರ ಬೆಳಗ್ಗೆ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು.

ಕರಾವಳಿ ಬೈಪಾಸ್‌ನಲ್ಲಿರುವ ಶಾರದ ಹೊಟೇಲ್‌ನ ಮಾಲಕರಾಗಿರುವ ಇವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದ ಇವರು, 2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.

2013ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಸಿಡಿ ಗದ್ದಲದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಕಂಡಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button