ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ, ಜೂ.26: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿರುವ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

1001310586 Udupi

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಮಳೆಯ ಮಧ್ಯೆಯೂ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಗೇಟು ಮೂಲಕ ಪ್ರವೇಶಿಸಿ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಅವರನ್ನು ಗೇಟ್‌ನಲ್ಲಿಯೇ ತಡೆದರು. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಪಕ್ಷದ ಮುಖಂಡರು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಸುಮಾರು 500ಕ್ಕೂ ಮಿಕ್ಕಿ ಕಾರ್ಯಕರ್ತರು ಹಾಜರಿದ್ದರು.

ಇದೇ ವೇಳೆ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಬಳಿಕ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು

Latest Indian news

Popular Stories