“ಮೇರಾ ಬೂತ್ ಸಬ್ಸೇ ಮಜ್ಬೂತ್” (ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ) ಅಭಿಯಾನದಡಿ ಜೂ.27ರಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಎಲ್ಲ ರಾಜ್ಯಗಳ ಬಿಜೆಪಿ ಕಾರ್ಯಕರ್ತ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ‘ಕಾರ್ಯಕರ್ತರೊಂದಿಗೆ ಸಂವಾದ’ದ ನೇರ ಪ್ರಸಾರವನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಕೋಶಾಧಿಕಾರಿ ಸಂತೋಷ್ ಆಚಾರ್ಯ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಮುಖರಾದ ಪ್ರದೀಪ್ ರಾವ್ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.