.
ಡಬಲ್ ಇಂಜಿನ್ ಸರಕಾರ ದೇಶ ಮತ್ತು ರಾಜ್ಯದಲ್ಲಿ ಜನ ಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಪೂರಕ ಆಡಳಿತದ ಮೂಲಕ ಸರ್ವ ವ್ಯಾಪಿ ಸರ್ವ ಸ್ಪರ್ಶಿ ಯೋಜನೆಗಳ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಾರಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಈ ಗೆಲುವು ಜನಸಾಮಾನ್ಯರ ಆಶೋತ್ತರಗಳಿಗೆ ಸಂದ ಜಯವಾಗಲಿದೆ ಎಂದರು.
ಉಡುಪಿ ವಿಧಾನ ಸಭೆ ಚುನಾವಣೆಯ ಬಿಜೆಪಿ ಮಹಾಭಿಯಾನ ಅಂಗವಾಗಿ ಶಾಸಕ ಕೆ ರಘುಪತಿ ಭಟ್ ರವರೊಂದಿಗೆ ನಂಚಾರು ಗ್ರಾಮದಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚನೆ ಮಾಡಿದರು.
ಮಹಿಳೆಯರ, ಕಾರ್ಮಿಕರ, ರೈತರ ಮೀನುಗಾರರ ಏಳಿಗೆಗೆ ಸದಾ ಸ್ಪಂದಿಸಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಕಾರ್ಯಕ್ರಮಗಳಿಗಾಗಿ ಮತದಾರರು ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದರು.
ಶಾಸಕ ರಘುಪತಿ ಭಟ್ ಮಾತನಾಡಿ ಉಡುಪಿ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಪ್ರತಾಪ್ ಹೆಗ್ಡೆ ಮಾರಾಳಿ, ಹರಿಮಕ್ಕಿ ರತ್ನಾಕರ ಶೆಟ್ಟಿ, ನಂಚಾರು ಸತೀಶ್ ಶೆಟ್ಟಿ, ಮಹೇಂದ್ರ ನೀಲಾವರ, ಸಂತೋಷ್ ಹೆಗ್ಡೆ, ಸಚಿನ್ ಪೂಜಾರಿ, ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.